ನ.14 ರಿಂದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು
ಕೊಪ್ಪಳ ಜಿಲ್ಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 20ರವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024ರ ಮುಖ್ಯಧ್ಯೇಯವು ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬುದಾಗಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಕೊಪ್ಪಳ ಸಹಕಾರ ಇಲಾಖೆ ಮತ್ತು ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 7 ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿವೆ.
*ಸಹಕಾರ ಸಂಘಗಳ ಉಪನಿಬಂಧಕರ ಮನವಿ:* 7 ದಿನಗಳಲ್ಲಿ ಕಡ್ಡಾಯವಾಗಿ ಸಹಕಾರ ಸಂಘಗಳ ಕಟ್ಟಡದ ಮೇಲೆ ಸಪ್ತವರ್ಣದ ಸಹಕಾರ ಬಾವುಟವನ್ನು ಹಾರಿಸುವುದರೊಂದಿಗೆ ಸಹಕಾರ ಕ್ಷೇತ್ರದ ಅಸ್ತಿತ್ವವನ್ನು ಸಾರ್ವಜನಿಕರಿಗೆ ತೋರಿಸಿಕೊಡಬೇಕು. ಅಂದಿನ ದಿನಗಳಲ್ಲಿ ಹಿರಿಯ ಸಹಕಾರಿಗಳಿಗೆ ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ, ಹೊಸ ಯೋಜನೆಗಳ ಅನುಷ್ಠಾನ ಮುಂತಾದ ನೈಜ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ಈ ಹಿನ್ನಲೆಯಲ್ಲಿ ಜನಸಾಮಾನ್ಯರಿಗೆ ಹಾಗೂ ಸಹಕಾರಿಗಳಿಗೆ ಉಪಯುಕ್ತವಾಗುವಂಥಹ ಉಚಿತ ಆರೋಗ್ಯ ತಪಾಷಣೆ ಶಿಬಿರ, ಲಸಿಕೆ ಕಾರ್ಯಕ್ರಮ, ರಕ್ತದಾನ ಶಿಬಿರ, ಸಹಕಾರ ಸಂಘಗಳು ಎದುರಿಸುತ್ತಿರುವ ಸವಾಲುಗಳು, ಸವಾಲುಗಳನ್ನು ಎದುರಿಸಲು ಅಗತ್ಯವಾದ ಮಾರ್ಗೋಪಾಯಗಳು, ಸಂವಾದ ಕಾರ್ಯಕ್ರಮಗಳು, ವಿಡಿಯೋ ಕಾನ್ಪರೆನ್ಸ್, ವೆಬಿನಾರ್ ಮುಂತಾದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ಕಾರಣ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಯು ಕಾರ್ಯಕ್ರಮ ಜರುಗುವ ಸ್ಥಳದಲ್ಲಿ ಹಾಜರಾಗಿ ಸಹಕಾರ ಚಳುವಳಿಯನ್ನು ಬಲಪಡಿಸಲು ಕೋರಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಮನವಿ ಮಾಡಿದ್ದಾರೆ.
*ಸಂವಾದ ಯಾವಾಗ?:* “ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು” ಕುರಿತು ನ.14ರಂದು ಬೆಳ್ಳಿಗ್ಗೆ 11 ಗಂಟೆಗೆ ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪೂರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂವಾದ ನಡೆಯಲಿದೆ. ಅದೇ ರೀತಿ “ಸಹಕಾರ ಸಂಸ್ಥೆಗಳಲ್ಲಿ ಅನ್ವೇಷಣೆ, ತಾಂತ್ರಿಕತೆ ಮತ್ತು ಉತ್ತಮ ಆಡಳಿತ” ಕುರಿತು ನ.15ರ ಬೆಳ್ಳಿಗ್ಗೆ 11ಕ್ಕೆ ಗಂಗಾವತಿ ತಾಲ್ಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಜನತಾ ಕ್ಯಾಂಪ್‌ನ ಇ.ಸಿ.ಐ ಸಭಾಭವನದಲ್ಲಿ, “ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ವಿಷಯ ಕುರಿತು ನ.16ರ ಬೆಳ್ಳಿಗ್ಗೆ 11ಕ್ಕೆ ಯಲಬುರ್ಗಾ ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ, “ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ” ವಿಷಯ ಕುರಿತು ನ.17ರ ಬೆಳ್ಳಿಗ್ಗೆ 11ಕ್ಕೆ ಕುಷ್ಟಗಿ ತಾಲ್ಲೂಕಿನ ಹನುಮನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ, “ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು” ವಿಷಯ ಕುರಿತು ನ.18ರ ಬೆಳ್ಳಿಗ್ಗೆ 11ಕ್ಕೆ ಕೊಪ್ಪಳ ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ, “ಮಹಿಳೆಯರು, ಯುವಕರು ಮತ್ತು ಅಬಲವರ್ಗಗಳಿಗಾಗಿ ಸಹಕಾರ ಸಂಸ್ಥೆಗಳು” ವಿಷಯ ಕುರಿತು ನ19ರ ಬೆಳ್ಳಿಗ್ಗೆ 11ಕ್ಕೆ ಕೊಪ್ಪಳ ನಗರದ ಗಾಣಿಗರ ಸಮುದಾಯ ಭವನದಲ್ಲಿ, “ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ವಿಷಯ ಕುರಿತು ನ.20ರ ಬೆಳ್ಳಿಗ್ಗೆ 11ಕ್ಕೆ ಕಾರಟಗಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ (ಎಲ್.ವಿ.ಟಿ)ಕಲ್ಯಾಣ ಮಂಟಪದಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.