ವೆಂಕಟಗಿರಿಯಲ್ಲಿ ಜನಸ್ಪಂದನ ಕಾರ್ಯಕ್ರಮ
: ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ತಾಲ್ಲೂಕು ಮಟ್ಟದ “ಜನ ಸ್ಪಂದನಾ” ಕಾರ್ಯಕ್ರಮವು ನವೆಂಬರ್ 12ರಂದು ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.ಈ “ಜನ ಸ್ಪಂದನಾ” ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.