ದೇಶ ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ಬಹು ಮುಖ್ಯ: ಇಒ ದುಂಡಪ್ಪ ತುರಾದಿ

0

Get real time updates directly on you device, subscribe now.

ಸುಭದ್ರ ದೇಶವನ್ನು ನಿರ್ಮಿಸುವಲ್ಲಿ ಯುವ ಮತದಾರರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮತದಾರರ ವಿಶೇಷ ಸಹಾಯಕ ನೊಂದಣಾಧಿಕಾರಿ ಹಾಗೂ ಕೊಪ್ಪಳ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಹೇಳಿದರು.
ತಾಲ್ಲೂಕಿನ ಅಳವಂಡಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 12 ರಂದು ಹಮ್ಮಿಕೊಳ್ಳಲಾಗಿದ್ದ ಯುವ ಮತದಾರರ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಹಳಷ್ಟು ಯುವಕರು ಮತದಾನದ ಮಹತ್ವದ ಬಗ್ಗೆ ತಿಳಿದಿರುವುದಿಲ್ಲ ಸುಭದ್ರ ಸರ್ಕಾರಕ್ಕೆ ಪ್ರತಿ ಮತ ಅಮೂಲ್ಯವಾದದ್ದು,. ಮತದಾನ ಎನ್ನುವದು ಪವಿತ್ರವಾದ ಕಾರ್ಯ ಹಾಗೂ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. 18 ವರ್ಷ ತುಂಬಿದ ಎಲ್ಲಾ ಯುವಕ ಮತ್ತು ಯುವತಿಯರು ಅಗತ್ಯವಾದ ವರ್ಗಾವಣೆ ಪ್ರಮಾಣಪತ್ರದ ಪ್ರತಿ, ಆಧಾರ ಕಾರ್ಡ ಪ್ರತಿ, 02 ಪಾಸ್ ಪಾರ್ಟ ಸೈಜ್ ಪೊಟೊ ಹಾಗು ಪಾಲಕರ ಮತದಾನ ಗುರುತಿನ ಚೀಟಿಯ ಪ್ರತಿಯೊಂದಿಗೆ ನಿಮ್ಮ ಹತ್ತಿರದ ಮತಗಟ್ಟೆ ಅಧಿಕಾರಿಗೆ ಸಂಪರ್ಕಿಸಿ ನೊಂದಣಿ ಮಾಡಿಕೊಳ್ಳಬೇಕೆಂದು ಯುವ ಮತದಾರರಿಗೆ ಕರೆ ನೀಡಿ, ನಿಮ್ಮ ಮನೆಯಲ್ಲಿ ಹಾಗೂ ಅಕ್ಕ ಪಕ್ಕದ ಮನೆಯಲ್ಲಿ 18 ವರ್ಷ ತುಂಬಿದವರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಕೊಳ್ಳಲು ಮಾಹಿತಿ ನೀಡುವಂತೆ ತಿಳಿಸಿದರು.
ಕೊಪ್ಪಳ ತಹಶೀಲ್ದಾರ ವಿಠಲ್ ಚೌಗಲಾ ಮಾತನಾಡಿ ಪ್ರತಿಯೊಬ್ಬ ಯುವ ಮತದಾರ ನೊಂದಣಿ ಮಾಡಿಕೊಳ್ಳಬೇಕು ಮತದಾನ ಎನ್ನುವದು ಪವಿತ್ರ ಕಾರ್ಯ ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವದು ಎಲ್ಲರ ಕರ್ತವ್ಯ ಹಾಗೂ ಪ್ರತಿಯೊಬ್ಬರ ಹಕ್ಕಾಗಿದೆ ಒಮ್ಮೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದರೆ ಎಲ್ಲಾ ಚುನಾವಣೆಗಳಲ್ಲಿ ಮತದಾನ ಹಕ್ಕು ಚಲಾಯಿಸಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಜಗದೀಶ ಹಾಲದಕಟ್ಟಿ, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ತಾಲೂಕ ಸ್ವೀಪ್ ತಂಡದ ಸದಸ್ಯ ಬಸವರಾಜ ಬಳಿಗಾರ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!