ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿನಿ ಮುಶಿರ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಗಂಗಾವತಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮ ದಿನಾಚರಣೆ ನಿಮಿತ್ತ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿತ್ತು.
ಮಹಾನ್ ಶಾಲೆಯ ವಿದ್ಯಾರ್ಥಿನಿಯಾದ ಮುಶಿರ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಎಸ್ಸೆ ಕಾಂಪಿಟೇಶನ್‌ಗೆ ಆಯ್ಕೆಯಾಗಿದ್ದು, ಮಹಾನ್ ಕಿಡ್ಸ್ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.
ಈ ಶುಭ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಚಂದ್ರಶೇಖರ್, ತಿಮ್ಮಪ್ಪ, ಶಾಲಿನಿ, ಪೂರ್ಣಿಮಾ, ಸಹನ, ಕುಮುದಿನಿ, ತೇಜಸ್ವಿನಿ, ಶಾಂತ ಇದ್ದರು.
Comments are closed.