ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ
: ನವೆಂಬರ್ 18ರಂದು ನಡೆಯುವ ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಿ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ನವೆಂಬರ್ 18ರಂದು ನಗರದ ಸಾಹಿತ್ಯ ಭವನದಲ್ಲಿ 11.30 ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಈ ಕುರಿತು ಸಮಾಜದ ಎಲ್ಲಾ ಜನರಿಗೆ ಮಾಹಿತಿ ನೀಡಿ. ಜಿಲ್ಲೆಯಲ್ಲಿ ಇತ್ತಿಚೆಗೆ ವಿವಿಧ ಕ್ಷೇತ್ರಗಲ್ಲಿ ರಾಜೋತ್ಸವ ಪ್ರಶಸ್ತಿ ಪಡೆದವರಿಗೂ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಹೇಳಿದರು.
ಸರ್ಕಾರದ ಎಲ್ಲಾ ಕಛೇರಿ ಹಾಗೂ ಶಾಲಾ- ಕಾಲೇಜುಗಳಲ್ಲಿ ಕನಕದಾಸರ ಜಯಂತಿ ಆಚರಣೆ ಮಾಡಬೇಕು ಇದು ಸರ್ಕಾರದ ನಿರ್ದೆಶನವಿದ್ದು ಎಲ್ಲರೂ ಪಾಲನೆ ಮಾಡಬೇಕು. ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಕೆ ರವಿ ಅವರನ್ನು ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಲು ಕಾರ್ಯಕ್ರಮಕ್ಕೆ ಆಹ್ವಾನಿಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮಗಳಿಗೆ ಹೆಚ್ಚಿನ ಜನರು ಸೇರಬೇಕಾದರೆ ಮುಂಚಿತವಾಗಿ ಸಮಾಜದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಮುಖಂಡರಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿ. ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿ ಕೊಪ್ಪಳ ನಗರದ ಸಾಹಿತ್ಯ ಭವನವನ್ನು ಸ್ವಚ್ಚಗೊಳಿಸಿ. ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಮಾತನಾಡಿ, ಶ್ರೀ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ. ಹಾಲುಮತ ಸಮಾಜದ ಕೊಪ್ಪಳ ತಾಲ್ಲೂಕು ಅಧ್ಯಕ್ಷರಾದ ಮುದ್ದಣ್ಣ ಬೇವಿನಹಳ್ಳಿ, ಕಾಳಿದಾಸ ಸಂಸ್ಥೆಯ ಕಾರ್ಯದರ್ಶಿ ಜಂಬಣ್ಣ, ಡೊಳ್ಳಿನ ಸಂಘದ ತಾಲ್ಲೂಕು ಅಧ್ಯಕ್ಷರಾದ ಗುಡದಪ್ಪ ಹಲಗೇರಿ, ಮುಖಂಡರಾದ ಶಿವರಾಮ್ ಗಬ್ಬೂರು, ಹನುಮಂತ ಹಳ್ಳಿಕೇರಿ, ವರುಣ ಕುಮಾರ್ ನೀಟ್ಟಾಲಿ, ಹನುಮಂತ ಅಬ್ಬಿಗೇರಿ ಸೇರಿದಂತೆ ಸಮಾಜದ ಇತರರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.