ನ.20ರಂದು ಮಂಡಲಗಿರಿಯಲ್ಲಿ ಅಪ್ರೆಂಟಿಶಿಫ್ ಡ್ರೈವ್
ಮಂಡಲಗಿರಿಯ ಶ್ರೀ ಜಗದ್ಗುರು ತೋಂಟದಾರ್ಯ ಕೈಗಾರಿಕಾತರಬೇತಿ ಸಂಸ್ಥೆ ಹಾಗೂ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ “ಅಪ್ರೆಂಟಿಶಿಫ್ ಡ್ರೈವ್” ಅನ್ನು ನವೆಂಬರ್ 20ರಂದು ಬೆಳಿಗ್ಗೆ 10 ರಿಂದ 02.30ರ ವರೆಗೆ ಮಂಡಲಗಿರಿ ಶ್ರೀ ಜಗದ್ಗುರು ತೋಂಟದಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಈ “ಅಪ್ರೆಂಟಿಶಿಫ್ ಡ್ರೈವ್”ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶ ವಿರುತ್ತದೆ.
ಐ.ಟಿ.ಐ ಆಲ್‌ಟ್ರೇಡ್ಸ್ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಅಪ್ರೆಂಟಿಶಿಫ್ ಡ್ರೈವ್‌ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು 18 ರಿಂದ 27 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯವತಿಯರು ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ, ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ “ಅಪ್ರೆಂಟಿಶಿಫ್ ಡ್ರೈವ್”ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇಲ್ಲಿಗೆ ಅಥವಾ ಮೊ: 9900883699, 9945082600, 6361143422 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.