ನ.16 & 17ರಂದು ಪಿ.ಡಿ.ಓ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ಗ್ರೂಪ ಸಿ ವೃಂದದ 97 ಹುದ್ದೆಗಳ ನೇಮಕಾತಿ ಹುದ್ದೆಗಳ ನೇಮಕಾತಿಗಾಗಿ ನ.16 ಮತ್ತು 17ರಂದು ಜಿಲ್ಲೆಯ ಕೊಪ್ಪಳ, ಗಂಗಾವತಿ, ಮತ್ತು ಕುಷ್ಟಗಿ ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಪಿ.ಡಿ.ಓ ನೇಮಕಾತಿ ಪರೀಕ್ಷೆಗಳು ನವೆಂಬರ್ 16 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕೊಪ್ಪಳ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಸೇರಿ ಒಟ್ಟು 29 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ನ.17ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ಕೊಪ್ಪಳ ಮತ್ತು ಗಂಗಾವತಿ ತಾಲ್ಲೂಕು ಸೇರಿ 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. 200 ಮೀಟರ್ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.
ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Comments are closed.