ಪತ್ರಿಕೋದ್ಯಮ ವಿಭಾಗದಿಂದ ರಸಪ್ರಶ್ನೆ ಕಾರ್ಯಕ್ರಮ

Get real time updates directly on you device, subscribe now.

ಕೊಪ್ಪಳ : ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ರಸ ಪ್ರಶ್ನೆ ಕಾರ್ಯಕ್ರಮವನ್ನು ಗುರುವಾರ ಆಯೋಜನೆ ಮಾಡಲಾಯಿತು.
ಪತ್ರಿಕೋದ್ಯಮ, ಸಮಾಜ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ರಾಜ್ಯಶಾಸ್ತ್ರ, ಇಂಗ್ಲಿಷ್, ಕನ್ನಡ, ಇತಿಹಾಸ, ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉತ್ಸುಕರಾಗಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ದ್ವಿತೀಯಾ ಸ್ಥಾನ ಹಾಗೂ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ತೃತೀಯಾ ಸ್ಥಾನ ಪಡೆದುಕೊಂಡರು.
ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ, ಕುಲಸಚಿವ ಪ್ರೊ.ಕೆ.ವಿ. ಪ್ರಸಾದ್, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ್ ಯಳವಟ್ಟಿ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ವಿವಿಧ ವಿಭಾಗಗಳ ಉಪನ್ಯಾಸಕರಾದ ಅಯ್ಯಪ್ಪ, ಪಾರ್ವತಿ, ಸಂತೋಷಕುಮಾರ, ಶ್ರೀಕಾಂತ್, ವಿರುಪಾಕ್ಷಿ, ಪ್ರವೀಣ ಪೋಲಿಸ್ ಪಾಟೀಲ, ಸತೀಶ್, ಭಾಷಾ , ಕುಮಾರ ನಾಯಕ, ಜಗದೀಶ, ಸುಧಾಕರ, ಪಾಪಣ್ಣ ಹಾಗೂ ವಿದ್ಯಾರ್ಥಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!