ತಂಬಾಕು ಮುಕ್ತ ಯುವ ಅಭಿಯಾನ 2.0 -ಎಲ್‌ಇಡಿ ವಾಹನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮದಡಿ ಜಿಲ್ಲೆಯ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಎಲ್‌ಇಡಿ ವಾಹನಕ್ಕೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಜಿಲ್ಲಾಡಳಿತ ಭವನದ ಆವರಣದಲ್ಲಿ ನ.13 ರಂದು ಚಾಲನೆ ನೀಡಿದರು.
ಬಳಿಕ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ತಂಬಾಕು ಸೇವನೆಯಿಂದಾಗುವ ಕ್ಯಾನ್ಸರ್ ಹೃದಯ ಸಂಬAಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು. ತಂಬಾಕು ಸೇವನೆಯಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಮಾತನಾಡಿ, ತಂಬಾಕಿನಲ್ಲಿ ನಿಕೊಟಿನ್ ಎಂಬ ವಿಷಕಾರಕ ಪದಾರ್ಥ ಇರುತ್ತದೆ. ಇದರಲ್ಲಿ 4000 ರಿಂದ 7000 ಅಪಾಯಕಾರಿ ರಾಸಾಯಿನಿಕ ತಂಬಾಕು ಪದಾರ್ಥಗಳು ಹೊಂದಿರುತ್ತವೆ. ಪ್ರತಿ ವರ್ಷ ವಿಶ್ವದಾದ್ಯಂತ ಲಕ್ಷಾಂತರ ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಇಂದಿನ ಯುವ ಪೀಳಿಗೆ ತಂಬಾಕು ಸೇವನೆಯಿಂದ ದೂರವಿದ್ದು, ದೇಶದ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸಿ ತಂಬಾಕು ಮುಕ್ತ ಸಮಾಜವನ್ನಾಗಿಸಲು ಮುಂದಾಗಬೇಕೆAದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಜಿಲ್ಲಾ ಸಲಹೆಗಾರರು, ಸೈಕಾಲಜಿಸ್ಟ್ ಮತ್ತು ಸಮಾಜ ಕಾರ್ಯಕರ್ತರು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಇತರೆ ಸಿಬ್ಬಂದಿಗಳು ಇದ್ದರು.

Comments are closed.