ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Get real time updates directly on you device, subscribe now.

 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಳಿಗೆ ಶೇ.5% ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1,00,000 ರೂ.ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6,00,000 ರೂ.ಗಳ ಮಿತಿಯೊಳಗಿರಬೇಕು.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ನಿಗಮದ ಸಹಾಯವಾಣಿ: 94484 51111, 08539-221847 ಗೆ ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಥವಾ ಇತರ ವಿವರಗಳನ್ನು hಣಣಠಿ://ತಿತಿತಿ.ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ತಿಳಿಯಬಹುದಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!