ಡಿ. 14 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತನ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು- ನ್ಯಾ. ಮಹಾಂತೇಶ್ ಎಸ್. ದರಗದ್

0

Get real time updates directly on you device, subscribe now.

ಕೊಪ್ಪಳ. ):- ಕೊಪ್ಪಳ ಜಿಲ್ಲೆಯಲ್ಲಿ ಡಿಸೆಂಬರ್ 14 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು. ಈ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವ ಸಲುವಾಗಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ ಮಹಾಂತೇಶ್ ಎಸ್. ದರಗದ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಷ್ಟ್ರೀಯ ಲೋಕ ಅದಾಲತನಲ್ಲಿ ರಾಜಿ ಸಂದಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಸಿವಿಲ್ ಪ್ರಕರಣಗಳಿದ್ದರೆ ಕೊರ್ಟ ಫಿ ಕಟ್ಟುವದು ತಪ್ಪುತ್ತದೆ. ಪ್ರೀ ಲಿಟಿಗೇಶನ್ ಪ್ರಕರಣಗಳಲ್ಲಿ ಜನರು ‌ಕೊರ್ಟಗಳಿಗೆ ಅಲಿಯುವದು ತಪ್ಪುತ್ತದೆ. ಕೌಟುಂಬಿಕ ಸಮಸ್ಯೆಗಳ ಪ್ರಕರಣ. ಸಿವಿಲ್ ಪ್ರಕರಣ. ಲ್ಯಾಂಡ್ ಡಿಸಪ್ಯೂಟ್ ಸಮಸ್ಯೆ. ಬ್ಯಾಂಕಿಂಗ್ ಸೇರಿದಂತೆ ಇತರೆ ಹಲವಾರು ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತಲ್ಲಿ ಇತ್ಯರ್ಥಗೊಳಿಸಲಾಗುತ್ತದೆ ಎಂದು ಹೇಳಿದರು.

ಲೋಕ ಅದಾಲತನಲ್ಲಿ ರಾಜಿ ಸಂದಾನದ ಮೂಲಕ ‌ಪ್ರಕರಣಗಳು ಇತ್ಯರ್ಥವಾಗುವದರಿಂದ ಜನರಿಗೆ ಸಮಯ ಉಳಿಯುತ್ತದೆ. ಊರಿಂದ ಕೋರ್ಟಗಳಿಗೆ ಅಲಿಯುವದು ತಪ್ಪುತ್ತದೆ. ಕರ್ಚು ಉಳಿಯುವದರ ಜೊತೆಗೆ ಕೆಲಸಕ್ಕೆ ಹೋಗಿ ದುಡಿಯುವವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ಸಲದ ರಾಷ್ಟ್ರೀಯ ಲೋಕ ‌ಅದಾಲತನಲ್ಲಿ 34420 ಪ್ರಕರಣಗಳು ಪೆಂಡಿಂಗ್ ಇದ್ದು 1489 ಪ್ರಕರಣಗಳು ರಾಜಿ ಸಂದಾನ ಆಗಲು ರೆಫರ ಆಗಿವೆ. ಹೋದ ಸಲದ ರಾಷ್ಟ್ರೀಯ ಲೋಕ ‌ಅದಾಲತನಲ್ಲಿ 14 ದಂಪತಿಗಳನ್ನು ಒಂದು ಮಾಡಲಾಗಿದೆ ಎಂದರು.

ಡಿಸೆಂಬರ್ 14 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತನಲ್ಲಿ ಕೊಪ್ಪಳ. ಗಂಗಾವತಿ. ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಬರುವ ಹಾಗೂ ವಿವಿಧ ಇಲಾಖೆಗಳಲ್ಲಿ ರಾಜಿಯಾಗುವ ಪ್ರಕರಣಗಳನ್ನು ನ್ಯಾಯಾಲಯದ ಮುಖಾಂತರ ಕಕ್ಷಿದಾರರು ತಮ್ಮ ರಾಜಿಯಾಗುವ ಪ್ರಕರಣಗಳನ್ನು ರಾಜಿಮಾಡಿಕೊಳ್ಳಲು ಅವಕಾಶವಿದ್ದು ಇದರ ಸದುಪಯೋಗವನ್ನು ಜಿಲ್ಲೆಯ ಜನರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿವಿಲ್ ಜಡ್ಜ್ ಮತ್ತು ಸಿಜೆಮ್ ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಮಲಕಾರಿ ರಾಮಪ್ಪ ಒಡೆಯರ್. ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಭಾಗ್ಯಲಕ್ಷ್ಮೀ. ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಆದಿತ್ಯ ಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!