ಮಾಧ್ಯಮದ ಅಭಿವ್ಯಕ್ತಿ ಮತ್ತು ಕೊಡುಗೆಯ ಅರಿವು ಮೂಡಿಸಬೇಕಿದೆ: ಪ್ರೊ. ಬಿ.ಕೆ.ರವಿ

0

Get real time updates directly on you device, subscribe now.

ಭಾರತ ಮಾಧ್ಯಮ ಮಂಡಳಿ ಸ್ಥಾಪನೆಯಾದ ಪ್ರಯುಕ್ತ ಆ ನೆನಪಿನಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮದ ಅಭಿವ್ಯಕ್ತಿ ಮತ್ತು ಕೊಡುಗೆಯನ್ನು ಅರಿವು ಮೂಡಿಸಬೇಕಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ.ರವಿ ಹೇಳಿದರು.
ಅವರು ಶನಿವಾರ ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪತ್ರಿಕೋದ್ಯಮವು ಇತ್ತಿಚಿನ ದಿನಗಳಲ್ಲಿ ಹಲವು ಬದಲಾವಣೆಗಳನ್ನು ಕಂಡಿದೆ. ಪತ್ರಕರ್ತರಲ್ಲಿ ಸಾಮಾಜಿಕ ಹೊಣೆಗಾರಿಕೆ ಬೇಕಾಗಿದೆ. ಧ್ವನಿ ಇಲ್ಲದವರ ಪರವಾಗಿ ಹಾಗೂ ತಪ್ಪಿನ ವಿರುದ್ಧ ಮಾಧ್ಯಮಗಳು ಧ್ವನಿ ಎತ್ತಬೇಕು. ಆರೋಗ್ಯಕರ ಮಾಧ್ಯಮದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.
ಕೊಪ್ಪಳ ವಿವಿ ಹಣಕಾಸು ಅಧಿಕಾರಿ ಅಮೀನಸಾಬ ಅತ್ತಾರ ಮಾತನಾಡಿ, ಪತ್ರಿಕಾ ರಂಗ ಪ್ರಜಾಪ್ರಭುತ್ವದ ಬಲಿಷ್ಠತೆ ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಬಹು ಮುಖ್ಯ ಪಾತ್ರ ವಹಿಸಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಪತ್ರಿಕಾರಂಗವು, ಪ್ರಜಾಪ್ರಭುತ್ವವನ್ನು ಬಲಗೊಳಿಸುವ ವಿಚಾರಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ ಎಂದರು.
ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ಇದೇ ವೇಳೆ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳ ವಿವಿಯ ಕುಲಸಚಿವ ಪ್ರೊ. ಕೆ.ವಿ.ಪ್ರಸಾದ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ್ ಯಳವಟ್ಟಿ , ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಶ್ರೀಕಾಂತ್, ಸಂತೋಷ ಕುಮಾರ, ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!