ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕ : ಕೆ.ರಾಜಶೇಖರ್
*ಕನಕಗಿರಿ:* ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ್ ಹೇಳಿದರು.
ಅವರು ಪಟ್ಟಣದ ತಾ.ಪಂ ಕಚೇರಿಯಲ್ಲಿ ಸೋಮವಾರ ಕನಕದಾಸ ಜಯಂತಿ ಪ್ರಯುಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನತೆ ದೃಷ್ಡಿಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು ಎಂದರು.
ಈ ಸಂದರ್ಭದಲ್ಲಿ ತಾ.ಪಂ ಸಿಬ್ಬಂದಿಗಳಾದ ಪವನಕುಮಾರ್, ಯಂಕೋಬ, ಶರಣಪ್ಪ, ಮಂಜುನಾಥ, ರಹೀಂಸಾಬ್, ಶಿವಕುಮಾರ್, ಪೂಜೇಶ್ ಇದ್ದರು.