ಸಮಗ್ರ ತತ್ವಪದ ಯೋಜನೆಯ 18 ಸಂಪುಟಗಳ ಲೋಕಾರ್ಪಣೆ

Get real time updates directly on you device, subscribe now.

ರವೀಂದ್ರ ಕಲಾಕ್ಷೇತ್ರದಲ್ಲಿ ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ‌ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ವಿದ್ವಾಂಸರಾದ ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಾಂಜನಚಾರ್ಯ ಅವರಿಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಇದೇ ವೇಳೆ ಸಮಗ್ರ ತತ್ವಪದ ಯೋಜನೆಯ 18 ಸಂಪುಟಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ,‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ,‌ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ಬಂಜಗೆರೆ ಜಯಪ್ರಕಾಶ್, ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಎಂ.ಈರಣ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!