ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ
ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ “ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ” ಸ್ವೀಕರಿಸಲಾಯಿತು. ನ.19 ರಿಂದ ನ.25 ರವರೆಗೆ “ರಾಷ್ಟ್ರೀಯ ಐಕ್ಯತಾ ಸಪ್ತಾಹ”ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ ರಾಷ್ಟ್ರದ ಸ್ವಾತಂತ್ರ‍್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವುದಕ್ಕಾಗಿ ಈ ಸಪ್ತಾಹವನ್ನು ಹಮ್ಮಿಕೊಂಡು ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವ ಕುರಿತಾದ ಸರ್ಕಾರದ ನಿರ್ದೇಶನದಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ನೇತೃತ್ವದಲ್ಲಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಸ್ವೀಕರಿಸಿದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ.ನಾಲವಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Comments are closed.