ನ.21ರಂದು ನೀರಾವರಿ ಸಲಹಾ ಸಮಿತಿ ಸಭೆ
: ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 122ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ನವೆಂಬರ್ 21ರಂದು ಮಧ್ಯಾಹ್ನ 3.30 ಗಂಟೆಗೆ ಮುನಿರಾಬಾದ್‌ನ ಟಿ.ಬಿ.ಪಿ ಕಾಡಾ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇಂದಿನ ಮೊದಲನೇ ಸುತ್ತಿನ ನೀರಾವರಿ ಸಲಹಾ ಸಮಿತಿ ಸಭೆ ಸುದ್ದಿಯಲ್ಲಿ ಸಭೆಯ ಸ್ಥಳವು ಮುನಿರಾಬಾದ್ ಎಂದು ತಪ್ಪಾಗಿದ್ದು, ಸಭೆಯ ಸ್ಥಳವು *ಬೆಂಗಳೂರಿನ ವಿಕಾಸ ಸೌಧ 4ನೇ ಮಹಡಿಯ ಕೊಠಡಿ ಸಂಖ್ಯೆ:419ರ ಸಮ್ಮೇಳನ ಸಭಾಂಗಣದಲ್ಲಿ* ಎಂದು ಸರಿಪಡಿಸಿಕೊಳ್ಳಲು ಕೋರಿದೆ.
*ಪರಿಷ್ಕೃತ ಪ್ರಕಟಣೆ*
*ನ.21ರಂದು ನೀರಾವರಿ ಸಲಹಾ ಸಮಿತಿ ಸಭೆ*
——
ಕೊಪ್ಪಳ ನವೆಂಬರ್ 19 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 122ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ನವೆಂಬರ್ 21ರಂದು ಮಧ್ಯಾಹ್ನ 3.30 ಗಂಟೆಗೆ ಬೆಂಗಳೂರಿನ ವಿಕಾಸ ಸೌಧ 4ನೇ ಮಹಡಿಯ ಕೊಠಡಿ ಸಂಖ್ಯೆ:419ರ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು.
ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಸಚಿವರುಗಳು, ಲೋಕಸಭಾ, ವಿಧಾನಸಭಾ, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.