ಮೊಬೈಲ್ ರಿಪೇರಿ, ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ಮೊಬೈಲ್ ರಿಪೇರಿ ಮತ್ತು ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗಳಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಉಚಿತವಾಗಿ ನೀಡಲಾಗುವುದು. ಮೋಬೈಲ್ ರೀಪೇರ್ ತರಬೇತಿಗಾಗಿ ಆಗಸ್ಟ್ 07ರಂದು ಸಂದರ್ಶನ ನಡೆಯಲಿದ್ದು, ಆಗಸ್ಟ್ 08ರಿಂದ ತರಬೇತಿ ಪ್ರಾರಂಭವಾಗಲಿವೆ. ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ತರಬೇತಿಗಾಗಿ ಆಗಸ್ಟ್ 14ರಂದು ಸಂದರ್ಶನ ನಡೆಯಲಿದ್ದು, ಆಗಸ್ಟ್ 15 ರಿಂದ ತರಬೇತಿ ಪ್ರಾರಂಭವಾಗಲಿವೆ.
ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರಗ ಕಾರ್ಡ್ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಇಲ್ಲಿಗೆ ಸಲ್ಲಿಸಬೇಕು ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.