ನಮ್ಮ ಭೂಮಿ- ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ- ಗುಳಗಣ್ಣವರ್

Get real time updates directly on you device, subscribe now.

Koppal  ವಕ್ಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 21 ಅಥವಾ 22ರಂದು ಜಿಲ್ಲಾಧಿಕಾರಿಗಳ ಕಚೇರಿ (ಡಿ.ಸಿ. ಕಚೇರಿ) ಹಾಗೂ ತಹಶೀಲ್ದಾರ್ ಕಚೇರಿಗಳ ಮುಂದೆ ಹೋರಾಟ ನಡೆಸಲಾಗುವುದು ಅಲ್ಲದೇ, ಅಹವಾಲು ಸ್ವೀಕಾರ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳ ಗಣ್ಣವರ್ ಹೇಳಿದ್ರು.

ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಮಾತನಾಡಿದ ಅವರು   ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠಮಂದಿರಗಳು, ಶಾಲೆಗಳು ಹಾಗೂ ಸಾರ್ವಜನಿಕ ಆಸ್ತಿಗಳ ಕುರಿತು ಬೆಳಿಗ್ಗೆಯಿಂದ ಸಂಜೆ ತನಕ ವೇದಿಕೆಗೆ ಬರಮಾಡಿಕೊಂಡು ಅಹವಾಲು ಸ್ವೀಕರಿಸುತ್ತೇವೆ. ಸಮಸ್ಯೆಯ ಗಂಭೀರತೆಯನ್ನು ಜಿಲ್ಲಾವಾರು ಪರಾಮರ್ಶೆ ಮಾಡುತ್ತೇವೆ.

* 3 ತಂಡಗಳನ್ನು ರಾಜ್ಯಾಧ್ಯಕ್ಷರು ಈಗಾಗಲೇ ಪ್ರಕಟಿಸಿದ್ದಾರೆ. ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರ ನೇತೃತ್ವದ ಒಂದು ತಂಡ, ವಿಪಕ್ಷ ನಾಯಕರಾದ ಆ‌ರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ತಂಡಗಳು ಕಾರ್ಯನಿರ್ವಹಿಸುತ್ತವೆ. ಈ ಮೂರು ತಂಡಗಳು ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ. ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ

ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಹಾಗೂ ನೈಜ ವರದಿಯನ್ನು ಸದನದಲ್ಲಿ  ಚರ್ಚಿಸುತ್ತೇವೆ. * ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ಪ್ರಮುಖ ರಾಜ್ಯ ನಾಯಕರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ತಂಡವು ಕನಿಷ್ಠ 8-10

ಜಿಲ್ಲೆಗಳನ್ನು ಪ್ರವಾಸ ಮಾಡಲಿದೆ.  * ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.

* ವಕ್ಸ್ ಆಸ್ತಿ ಸಂಬಂಧ ಇಡೀ ರಾಜ್ಯದಲ್ಲಿ ಸಮಸ್ಯೆ ಎದುರಾಗಿದೆ. ಆ ಸಮಸ್ಯೆಗೆ ತಾರ್ಕಿಕ ಅಂತ್ಯ ಹುಡುಕುವ ನಿಟ್ಟಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರನೇತೃತ್ವದಲ್ಲಿ ಕಳೆದ ಹತ್ತಾರು ದಿನಗಳಿಂದ ಪಕ್ಷದೊಳಗೆ ಆಂತರಿಕ ಚರ್ಚೆ ನಡೆಸಿ ವ್ಯವಸ್ಥಿತವಾಗಿ ಜನರನ್ನು ಸಂಪರ್ಕಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿ ಜಿಲ್ಲೆಯಲ್ಲೂ 5 ಜನರ ತಂಡ ರಚಿಸಲಾಗಿದ್ದು ಆ ಪ್ರತಿ ತಂಡದಲ್ಲಿ ವಕೀಲರೂ, ರೈತ ಮುಖಂಡರು ಇರುತ್ತಾರೆ.

. ಕಾನೂನಾತ್ಮಕ ಹೋರಾಟಕ್ಕೆ ಶಕ್ತಿ ತುಂಬುವ ಸಲುವಾಗಿ ಈ ತಂಡ ರಚಿಸಲಾಗಿದೆ. ‘ನಮ್ಮ ಭೂಮಿ- ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಮಠಾಧೀಶರೂ ಸೇರಿದಂತೆ ಜಿಲ್ಲೆಯ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಂತೆ ಎಲ್ಲರನ್ನೂ ಭೇಟಿ ಮಾಡುವುದರ ಮೂಲಕ ಜನಜಾಗೃತಿ ಮೂಡಿಸುತ್ತಿದ್ದೇವೆ. ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ನಾವು ಕಾರ್ಯಕ್ರಮವನ್ನು ರೂಪಿಸಿದ್ದೇವೆ.

ತಮ್ಮ ತಮ್ಮ ಜಿಲ್ಲೆಯಲ್ಲಿ ನಿರ್ಧರಿಸಿದ ಹೋರಾಟದ ದಿನಾಂಕದಂದು ನಾಯಕರುಗಳು, ಮಠಾಧೀಶರುಗಳು, ರೈತ ಮುಖಂಡರುಗಳು, (ಚಲನಚಿತ್ರ ನಟರು) ಸೆಲೆಬ್ರಿಟಿಗಳು, ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ.

* ಪ್ರತಿಯೊಬ್ಬ ರೈತರು ಹಾಗೂ ಸಾರ್ವಜನಿಕರಲ್ಲಿ ವಿನಂತಿ ಮಾಡುವುದೆನೆಂದರೆ ತಾವುಗಳು ತಪ್ಪದೇ ತಮ್ಮ ಜಾಗದ ಪಹಣಿಯನ್ನು ಪರೀಕ್ಷಿಸಿಕೊಳ್ಳಬೇಕು.

* ನೋಟಿಸ್ ಹಿಂಪಡೆಯುವಂತೆ ಮುಖ್ಯಮಂತ್ರಿಗಳು ಹೇಳಿದ್ದು ಕೇವಲ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಯ ಕಣ್ಣೆರೆಸುವ ತಂತ್ರವೇ? ರೈತರ ಕುರಿತು ಕಾಂಗ್ರೆಸ್ಸಿನದು ಮೊಸಳೆ ಕಣ್ಣೀರಲ್ಲವೇ? 1974ರ ವಕ್ಸ್ ಆಸ್ತಿ ಕುರಿತ ಗಜೆಟ್ ಅನ್ನು ಹಿಂಪಡೆಯಲು ರಾಜ್ಯದ ಕಾಂಗ್ರೆಸ್ ಸರಕಾರ ಬದ್ಧತೆಯನ್ನು ಪ್ರದರ್ಶಿಸುವುದೇ? ಉತ್ತರಿಸಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನೆ ಮಾಡಿದ್ರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಸೇರಿದಂತೆ ಇತರರು ಉಪ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!