ಸಂಕಲ್ಪ ಪ್ರ.ದ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ವಲಯ ಮಟ್ಟಕ್ಕೆ ಆಯ್ಕೆ

Get real time updates directly on you device, subscribe now.

೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ

ಗಂಗಾವತಿ: ಯಲಬುರ್ಗಾದಲ್ಲಿ ನಡೆದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಂಗಾವತಿ ನಗರದ ಸಂಕಲ್ಪ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಕು. ಕಾವೇರಿ ಎಂ ತಂ ಬಸವರಾಜ ಇವರು ಜಾನಪದ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪ್ರಥಮ ಪಿಯುಸಿ ಕಲಾ ವಿಭಾಗದ ಕು. ಅಕ್ಷಿತಾ ತಂ. ಆನಂದ್ ಆಶುಭಾ?ಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಅನಿತಾ ತಂ. ಶಿವಣ್ಣ ಭಕ್ತಿಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದು, ಇವರಲ್ಲಿ ಪ್ರಥಮ ಸ್ಥಾನ ಪಡೆದ ಕು: ಅಕ್ಷೀತಾ ಮತ್ತು ದ್ವಿತೀಯ ಸ್ಥಾನ ಪಡೆದ ಕು: ಕಾವೇರಿ ಎಂ, ವಿದ್ಯಾರ್ಥಿನಿಯರು ರಾಜ್ಯ ವಲಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಹೇಮಂತ್ ರಾಜ ಕಲ್ಯಂಗಿ, ಕಾರ್ಯಾಧ್ಯಕ್ಷರಾದ ನಾಗರಾಜ ಗುತ್ತೇದಾರ್, ಉಪಾಧ್ಯಕ್ಷರಾದ ಡಾ. ಎಂ.ಆರ್.ಮಂಜುಸ್ವಾಮಿ, ಕಾರ್ಯದರ್ಶಿಯಾದ ಬಸವರಾಜ ಎಲ್ ಕೇಸರಹಟ್ಟಿ, ಕೋಶಾಧ್ಯಕ್ಷರಾದ ಮಲ್ಲಿಕಾರ್ಜುನ ಎಸ್ ಸಿಂಗನಾಳ್, ಹಾಗೂ ಕಾಲೇಜಿನ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ತಿಳಿಸಿ ಶುಭಕೋರಿರುತ್ತಾರೆ.

Get real time updates directly on you device, subscribe now.

Comments are closed.

error: Content is protected !!