ಡಿ.04ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ, ಮರೆತುಹೋದ ಖಾದ್ಯಗಳ ಪಾಕಸ್ಪರ್ಧೆ
ಕೃಷಿ ಇಲಾಖೆ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ 2025ರ ಅಂಗವಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ 04ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಒಂದು ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತುಹೋದ ಖಾದ್ಯದ ತಿನಿಸನ್ನು ಆಯ್ಕೆಮಾಡುವುದು ಆಯ್ಕೆ ಮಾಡಿದಂತಹ ವಿಜೇತರಿಗೆ ಬಹುಮಾನವಾಗಿ ಪ್ರಥಮ 5000, ದ್ವಿತೀಯ 3000 ಹಾಗೂ ತೃತಿಯ ಬಹುಮಾನ 2000 ರೂ.ಗಳನ್ನು ನೀಡಲಾಗುವುದು.
ಬೆಂಗಳೂರಿನಲ್ಲಿ ಆಯೋಜಿಸುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತರು ಸ್ವತಃ ತಿನಿಸನ್ನು ತಯಾರಿಸಲು ಅವಶ್ಯವಿರುವ ಸಾಮಗ್ರಿಗಳೊಂದಿಗೆ ಸಿದ್ದರಿರಬೇಕು. ಜಿಲ್ಲಾ ಮಟ್ಟದ ಪ್ರಥಮ ಬಹುಮಾನ ವಿಜೇತರು ನಿಗದಿತ ದಿನಾಂಕದAದು ಸ್ವತಃ ಬೆಂಗಳೂರಿನಲ್ಲಿ ಆಯೋಜಿಸುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾದ ಸಾಮಗ್ರಿಗಳನ್ನು ತಾವೆ ತೆಗೆದುಕೊಂಡು ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಅಲ್ಲಿಯೇ ತಯಾರಿಸಲು ಸಿದ್ದರಿರಬೇಕು. ಸ್ಪರ್ಧೆಯಲ್ಲಿ ತಯಾರಿಸಿದ ಖಾದ್ಯಗಳ ಚಿತ್ರಣವನ್ನು ವಿಡೀಯೊದಲ್ಲಿ ಕಡ್ಡಾಯವಾಗಿ ದಾಖಲು ಮಾಡಲಾಗುತ್ತದೆ.
ಆಸಕ್ತರು ತಮ್ಮ ಹೆಸರನ್ನು ನವೆಂಬರ್ 30ರೊಳಗಾಗಿ ನೋಂದಾಯಿಸಬೇಕಾಗಿದ್ದು, ನೋಂದಣಿ ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9611709089 ಗೆ ಕರೆ ಮಾಡಬಹುದಾಗಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.