ಕಲ್ಪತರ ನಾಡಿನಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟಕ್ಕೆ ಕ್ಷಣಗಣನೆ

Get real time updates directly on you device, subscribe now.


ಅಂದು ಕ್ರೀಡಾಂಗಣದಲ್ಲಿ ಮೇಳೈಸಲಿರುವ ಸುದ್ದಿಮಿತ್ರರು

ಬೆಂಗಳೂರು:
ಕಲ್ಪತರ ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಮತ್ತು ತುಮಕೂರು ಜಿಲ್ಲಾ ಘಟಕ ವತಿಯಿಂದ ನ.24ರಂದು ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಸಿದ್ಧತೆಗಳು ಪೂರ್ಣಗೊಂಡಿದೆ. ಎಲ್ಲಾ ಜಿಲ್ಲೆಯ ಪತ್ರಕರ್ತರು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪತ್ರಕರ್ತರು ಒತ್ತಡದ ಬದುಕನ್ನು ನಿಭಾಯಿಸಿಕೊಳ್ಳಲು ಕ್ರೀಡೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಕೆಯುಡಬ್ಲೂೃಜೆ ಪ್ರತಿ ವರ್ಷವೂ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಈ ಬಾರಿಯೂ ಸಾವಿರಕ್ಕೂ ಹೆಚ್ಚು ಪತ್ರಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕ್ರಿಕೇಟ್‌ಗೆ ಮಾತ್ರವೇ ಸೀಮಿತ ಮಾಡಿ ಕ್ರೀಡಾಕೂಟವನ್ನು ಆಯೋಜಿಸುವ ಬದಲಿಗೆ ಈ ಬಾರಿ ಕ್ರಿಕೆಟ್ ಹೊರತುಪಡಿಸಿ ಇನ್ನುಳಿದ ಅಥ್ಲೆಟ್ ಕ್ರೀಡೆಗಳನ್ನು ಆಡಿಸಲಾಗುತ್ತಿದೆ ಎಂದರು.
ನ.24ರಂದು ಬೆಳಿಗ್ಗೆ 8 ಗಂಟೆಗೆ ವಾಕಥಾನ್ ಉದ್ಘಾಟನೆಗೊಳ್ಳಲಿದೆ. 9 ಗಂಟೆಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೆಂದ್ರ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿರಜನೀಶ್, ಕ್ರೀಡಾಪಟು ದೊಡ್ಡಗಣೇಶ್, ಶಾಸಕರುಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮೊದಲು ಹಗ್ಗ ಜಗ್ಗಾಟ ನಡೆಯಲಿದೆ. ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನೇತೃತ್ವದಲ್ಲಿ ಪತ್ರಕರ್ತರ ತಂಡ, ಗೃಹ ಸಚಿವ ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಜಿಲ್ಲಾಡಳಿತ ತಂಡ ಹಗ್ಗ ಜಗ್ಗಾಟ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದೆ ಎಂದರು. ಕ್ರೀಡಾ ಕೂಟದಲ್ಲಿ ಸಂಪ್ರದಾಯಿಕ ಆಟೋಟ ಸ್ಪರ್ಧೆಗಳಲ್ಲದೆ, ದೇಶೀಯ ಕ್ರೀಡೆ ಕಬ್ಬಡ್ಡಿಯನ್ನು ಆಯೋಜಿಸಲಾಗಿದೆ ಎಂದರು.
ಸುವರ್ಣ ಕರ್ನಾಟಕ ಮಹೋತ್ಸವ ಸಂದರ್ಭದಲ್ಲಿ ಆಯೋಜಿಸಿರುವ ಈ ಕ್ರೀಡಾಕೂಟದಲ್ಲಿ ಪತ್ರಕರ್ತರ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ವಿನಂತಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ನಗರ ಘಟಕದ ನಂಜುಂಡಪ್ಪ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!