ದಿ 26 ರಂದು ಚಲವಾದಿ ಸಮಾಜ ದಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

Get real time updates directly on you device, subscribe now.

ಕೊಪ್ಪಳ ,ನ 22, ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ ಹಾಗೂ ಛಲವಾದಿ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘ ದ ವತಿಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ 2023,24ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ ಶೇಕಡ 60 ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೇ ದಿನ 26ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಮೇಘರಾಜ್ ಕಲ್ಯಾಣ ಮಂಟಪ ದಲ್ಲಿ ನಡೆಯಲಿದೆ ಎಂದು ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ ಸಂಚಾಲಕರಾದ ಕೃಷ್ಣ ಎಂ ಇಟ್ಟಂಗಿ ಹೇಳಿದರು,
ಅವರು ಶುಕ್ರವಾರ ಬೆಳಿಗ್ಗೆ ಇಲ್ಲಿನ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿಕೆ ನೀಡಿದ ಅವರು ಶ್ರೀ ಗವಿಮಠದ ಪರಮಪೂಜ್ಯ ಶ್ರೀ ಗವಿಸಿದ್ವೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯದಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಉದ್ಘಾಟನೆ ನೆರವೇರಿಸಲಿದ್ದಾರೆ, ಮಹನೀಯರ ಭಾವಚಿತ್ರಕ್ಕೆ ಕ ,ಕೋ,ನಿ, ಮಂಡಳಿ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಪುಷ್ಪಾರ್ಚನೆ ಮತ್ತು ಗೌರವ ನಮನ ಸಲ್ಲಿಸಲಿದ್ದಾರೆ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಉಪನ್ಯಾಸಕರಾದ ಚನ್ನಬಸವ ಚಲವಾದಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಮುಖ್ಯ ಅತಿಥಿಗಳಾಗಿ ವಿರೋದ್ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಸಿಎಂ ರವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ,ಸಂಸದ ಕೆ ರಾಜಶೇಖರ್ ಹಿಟ್ನಾಳ, ಶಾಸಕ ಕೆ ರಾಘವೇಂದ್ರ ಹಿಟ್ನಾಳ ,ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ ,ಮಾಜಿ ಸಂಸದ ಸಂಗಣ್ಣ ಕರಡಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ, ಶ್ರೀನಿವಾಸ ಗುಪ್ತ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಕೃಷ್ಣ ಎಂ ಇಟ್ಟಂಗಿ ವಿವರಿಸಿದ್ದರು,
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಅಧ್ಯಕ್ಷರಾದ ಜಿ ,ಎಮ್. ಬೆಲ್ಲದ್, ಸೊಷಿತ ಸಮುದಾಯಗಳ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ, ಅನಿಲ್ ಕುಮಾರ್ ಬೆಗಾರ್, ಅಲ್ಲದೆ ಸಿದ್ದರಾಮಪ್ಪ ಹೊಸಮನಿ ಮತ್ತು ಸಮಾಜದ ಯುವ ನಾಯಕ ಕಾಶಪ್ಪ ಚಲವಾದಿ ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!