ಸಂಜೀವಿನಿ ಮಾಸಿಕ ಸಂತೆಯಿಂದ ಆದಾಯ ವೃದ್ಧಿ : ವೀರಣ್ಣ ನಕ್ರಳ್ಳಿ
ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮಕ್ಕೆ ತಾ.ಪಂ AD PR ರಿಂದ ಚಾಲನೆ
ಕನಕಗಿರಿ: ಪ್ರತಿ ತಿಂಗಳು ಮಾಸಿಕ ಸಂತೆ ಆಯೋಜನೆಯಿಂದ ಸ್ವಸಹಾಯ ಸಂಘದ ಮಹಿಳೆಯರಿಗೆ ಅನುಕೂಲವಾಗಿದೆ ಎಂದು ತಾ.ಪಂ (ಪ್ರಭಾರಿ) AD PR ವೀರಣ್ಣ ನಕ್ರಳ್ಳಿ ಹೇಳಿದರು.
ಅವರು, ಪಟ್ಟಣದ ವಾರದ ಸಂತೆಯ ಮೈದಾನದಲ್ಲಿ ತಾ.ಪಂ ಎನ್.ಆರ್.ಎಲ್.ಎಂ ಸಂಜೀವಿನಿ ಯೋಜನೆಯಡಿ ಆಯೋಜಿಸಿದ್ದ ಸಂಜೀವಿನಿ ಮಾಸಿಕ ಸಂತೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಮಾಸಿಕ ಸಂತೆ ಆಯೋಜನೆಯಿಂದ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ವೇದಿಕೆ ಕಲ್ಪಿಸುವ ಜೊತೆಗೆ ಆದಾಯವನ್ನು ಹೆಚ್ಚಿಸಿದಂತಾಗಿದೆ ಎಂದರು.
ಸದರಿ ಮಾಸಿಕ ಸಂತೆಯಲ್ಲಿ ಮಹಿಳೆಯರೇ ತಯಾರಿಸಿದ ವಿವಿಧ ಉತ್ಪನ್ನಗಳಾದ ಸಿಹಿ ತಿನಿಸುಗಳು, ಬಟ್ಟೆ ವ್ಯಾಪಾರ, ಬಳೆ ವ್ಯಾಪಾರ, ಶೇಂಗಾ ಚಕ್ಕಿ ವ್ಯಾಪಾರ, ಖಾರದ ಪುಡಿ ವ್ಯಾಪಾರ, ಕಸೂತಿ ಸೇರಿದಂತೆ ಕರಕುಶಲ ವಸ್ತುಗಳು ಲಭ್ಯವಿದ್ದವು.
ಈ ಸಂದರ್ಭದಲ್ಲಿ, ತಾಲೂಕು ಎನ್.ಆರ್.ಎಲ್.ಎಂ ಸಂಯೋಜಕಿ ರೇಣುಕಾ, ತಾ.ಪಂ ವಿಷಯ ನಿರ್ವಾಹಕ ಯಂಕೋಬ, ಕೆ.ಪವನ್ ಕುಮಾರ ಕಂಪ್ಯೂಟರ್ ಆಪರೇಟರ್ ಹುಲಿಗೇಶ್ ಸಂಜೀವಿನಿ ತಾಲೂಕು ಮಟ್ಟದ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಸೇರಿದಂತೆ ಸ್ವಸಹಾಯ ಸಂಘದ ಮಹಿಳೆಯರು, ಎಂಬಿಕೆ, ಎಲ್.ಸಿ.ಆರ್.ಪಿ, ಕೃಷಿ-ಪಶು ಸಖಿಯರು ಹಾಜರಿದ್ದರು.
Comments are closed.