ನ.27 ರಂದು ಕೊಪ್ಪಳದಲ್ಲಿ ಸಿರಿಧಾನ್ಯ ನಡಿಗೆ
: ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ನವೆಂಬರ್ 27ರಂದು ನಗರದ ಶ್ರೀ ಗವಿಸಿದ್ದೇಶ್ವರ ಗವಿಮಠ ಆವರಣದಿಂದ ಅಶೋಕ ಸರ್ಕಲ್ ವರೆಗೆ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಗವಿಸಿದ್ದೇಶ್ವರ ಗವಿಮಠ ಆವರಣದಿಂದ ಬೆಳಿಗ್ಗೆ 7 ಗಂಟೆಗೆ ಪ್ರಾರಂಭ ಗೊಂಡು ಗಡಿಯಾರ ಕಂಬ ಮತ್ತು ಜವಾಹರ ರಸ್ತೆ ಮಾರ್ಗವಾಗಿ ಅಶೋಕ ಸರ್ಕಲ್ ವರೆಗೆ ನಡೆಯಲಿರುವ ಸಿರಿಧಾನ್ಯ ನಡಿಗೆಯಲ್ಲಿ ಎಲ್ಲಾ ಸಿರಿಧಾನ್ಯಗಳು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಹೃದಯ ಆರೋಗ್ಯ, ಮದುಮೇಹ ನಿಯಂತ್ರಣ ಮತ್ತು ತೂಕ ಸಮತೋಲನಕ್ಕೆ ಸಹಾಯ ಮಾಡುತ್ತವೆ. ಈ ಆಹಾರಗಳ ಉಪಯೋಗ ವಿವಿಧ ರೀತಿಯ ಸ್ಪರ್ಧೆಗಳು ನಮ್ಮ ಪಾರಂಪರಿಕ ಆಹಾರ ಪದ್ಧತಿಗಳನ್ನು ಜನಪ್ರಿಯಗೊಳಿಸಲು ಸಹಾಯ ಮಾಡುತ್ತವೆ.
ಈ ಕಾರ್ಯಕ್ರಮದಿಂದ ಜನರು ತಮ್ಮ ದಿನನಿತ್ಯದ ಆಹಾರ ಪದ್ದತಿಯಲ್ಲಿ ಸಿರಿಧಾನ್ಯಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹವಾಗುತ್ತದೆ. ಈ ಆಹಾರಗಳ ಉಪಯಕ್ತತೆ ಬಗ್ಗೆ ತಿಳಿಸುವುದು ಅತೀ ಅವಶ್ಯಕವಾಗಿರುವುದರಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಎಲ್ಲಾ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.