ಸಂವಿಧಾನ ವಾಚನ ಕಾರ್ಯಕ್ರಮ
ಸಂವಿಧಾನ ದಿನ ಕಾರ್ಯಕ್ರಮ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮವನ್ನು ನವೆಂಬರ್ 26ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಆಡಿಟೋರಿಯಮ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸರಕಾರದ ಆದೇಶದಂತೆ ನವೆಂಬರ 26ರಂದು ಸಂವಿಧಾನ ದಿನ ಪ್ರಯುಕ್ತ ಸಂವಿಧಾನ ಪಿಠೀಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಮತ್ತು ಸಂವಿಧಾನದ ಮೌಲ್ಯಗಳು, ಸಂವಿಧಾನ ಮೂಲ ಆಶಯಗಳ ಬಗ್ಗೆ ಚರ್ಚೆ, ರಸಪ್ರಶ್ನೆ, ಕಾರ್ಯಕ್ರಮಗಳನ್ನು ಮತ್ತು ವೆಬಿನಾರ್‌ಗಳನ್ನು ಆಯೋಜಿಸಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದು, ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು, ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ನ.26ರ ಸಂವಿಧಾನ ದಿನದಂದು ಸಾಮೂಹಿಕವಾಗಿ ಓದುವದರ ಮೂಲಕ ಮತ್ತು ಸಂವಿಧಾನದ ಮೌಲ್ಯಗಳು, ಮೂಲ ಆಶಯಗಳ ಬಗ್ಗೆ ಚರ್ಚೆ, ರಸಪ್ರಶ್ನೆ ಕಾರ್ಯಕ್ರಮಗಳನ್ನು ಮತ್ತು ವೆಬಿನಾರ್‌ಗಳನ್ನು ಆಯೋಜಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಈ ಮೂಲಕ ಸೂಚಿಸಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮಕ್ಕೆ ಗೈರು ಹಾಜರಾದ ಅಧಿಕಾರಿ, ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಮತ್ತು ತಾಲ್ಲೂಕು ಮಟ್ಟದ ಕಛೇರಿಗಳಲ್ಲಿ ಸಹ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.