ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಸಂವಿಧಾನವೇ ದೊಡ್ಡ ಶಕ್ತಿ.: ಭೀಮಪ್ಪ ಹವಳಿ
ಯಲಬುರ್ಗಾ.ನ.26:ಭಾರತದ ಸಂವಿಧಾನ ದಿನವನ್ನು. ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.ನಂತರದಲ್ಲಿ ಜನವರಿ 26, 1950 ರಂದು ಜಾರಿಗೊಳಿಸಲಾಯಿತು. ಅಂದಿನಿಂದ, ಸಂವಿಧಾನವು ಭಾರತದ ಹಾದಿ ಮತ್ತು ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮಾರ್ಗದರ್ಶನ ಮಾಡುತ್ತಿದೆ. ಸಂವಿಧಾನ ದಿನಾಚರಣೆಯ ಆಚರಣೆ ಮತ್ತು ನಂತರದ ಚಟುವಟಿಕೆಗಳು ಭಾರತೀಯ ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸಂವಿಧಾನ ಶಿಲ್ಪಿ. ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಗಳನ್ನು ಅಂಗೀಕರಿಸುವ ಗುರಿಯನ್ನು ಹೊಂದಿವೆ. 26 ನವೆಂಬರ್, 2019 ರಿಂದ ಭಾರತದಾದ್ಯಂತ ಸಂವಿಧಾನ ದಿನಾಚರಣೆಯ ವರ್ಷವಿಡೀ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ಚಟುವಟಿಕೆಗಳು ಭಾರತೀಯ ಸಂವಿಧಾನದಲ್ಲಿ ವ್ಯಕ್ತಪಡಿಸಿದ ತತ್ವ ಮೌಲ್ಯಗಳ ಕಡೆಗೆ ಭಾರತೀಯರನ್ನು ಪುನರುಚ್ಚರಿಸಲು ಮತ್ತು ಭಾರತೀಯ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ತಮ್ಮ ಸರಿಯಾದ ಪಾತ್ರವನ್ನು ನಿರ್ವಹಿಸಲು ನಾಗರಿಕರನ್ನು ಉತ್ತೇಜಿಸುವ ಗುರಿಯನ್ನು ಹೊಂದಿವೆ. ಇದಲ್ಲದೆ, ಈ ಆಚರಣೆಯು ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಪ್ರತಿ ಮನೆಗೆ ಮುಟ್ಟಿಸುವ ಪ್ರಯತ್ನ ಆಗಬೇಕೆಂದು ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಭಿಮಪ್ಪ ಹವಳಿ ಮಾತನಾಡಿದರು.
ತಾಲ್ಲೂಕಿನ ಕರಮುಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು.ನಮ್ಮ ದೇಶದಲ್ಲಿ ಹೊಸ ಶಕ್ತಿ
ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಡಿಸುವುದು,
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ನಮ್ಮದೆಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ್ ಕಿಳ್ಳಿಕ್ಯಾತರ ಅವರು ಮತನಾಡಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಶಿಕ್ಷಕರಾದ ಬಸವರಾಜ್ ಕೊಂಡಗುರಿಯವರು ಓದಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಿಂಗರಾಜ್ ಉಳ್ಳಾಗಡ್ಡಿ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಕರಾದ ವೆಂಕಟೇಶ. ಶರಣಪ್ಪ ಕುಂಬಾರ.ದೇವಪ್ಪ ಹಾದಿಮನಿ.ಸುನಿತಾ.ಗ್ರಂಥ ಪಾಲಕರು ಶಿವಪುತ್ರಪ್ಪ ಉಳ್ಳಾಗಡ್ಡಿ. ಪಂಚಾಯತ ಡಿ.ಒ.ಮಂಜುನಾಥ್ ನಿಂಗೋಜಿ. ನಿಂಗಪ್ಪ ಚಲವಾದಿ.ವಿದ್ಯಾರ್ಥಿಗಳು ಇನ್ನಿತರರು ಇದ್ದರು.
Comments are closed.