ಜಿಲ್ಲಾ ಬಾಲಕಾರ್ಮಿಕ ಯೋಜನೆ: ತಪಾಸಣೆ, ವಿಶೇಷ ಜಾಗೃತಿ

Get real time updates directly on you device, subscribe now.

 : ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ದಾಳಿ, ತಪಾಸಣೆ ಕಾರ್ಯಾಚರಣೆ ಮೂಲಕ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಅವರಿಗೆ ಪುನರ್ವಸತಿಗೊಳಿಸಲಾಗಿದೆ. ಇದರ ಜೊತೆಗೆ ಸಾರ್ವಜನಿಕರಿಗೆ ವಿಶೇಷ ಜಾಗೃತಿ ಮೂಡಿಸಲಾಗಿದೆ.ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ ಹಾಗೂ ಜಿಲ್ಲಾಧಿಕಾರಿಗಳು, ಕೊಪ್ಪಳ ಹಾಗೂ ಕಾರ್ಮಿಕ ಆಯುಕ್ತರು ಬೆಂಗಳೂರು ರವರ ನಿರ್ದೇಶನದಂತೆ PAN-INDIA Rescue & Rehabilitation Campaign of Child and Adolescent Labour “A Step to Eradicate Child Labour” ಅನ್ನು 2024ರ ಅಕ್ಟೋಬರ್ ನಿಂದ ನವೆಂಬರ್ ರವರೆಗೆ ಒಂದು ತಿಂಗಳ ರಕ್ಷಣಾ ಅಭಿಯಾನವನ್ನು ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬಾಲಕಾರ್ಮಿಕ ಯೋಜನೆಯ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸದಸ್ಯರ ಅಧಿಕಾರಿಗಳು ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಲು ವಿವಿಧ ಹೋಟೆಲ್, ಗ್ಯಾರೇಜ್, ಕಾರ್ಖಾನೆಗಳು, ಇಟ್ಟಂಗಿ ಭಟ್ಟಿ, ಬೇಕರಿ ಅಂಗಡಿ, ಬಟ್ಟೆ ಅಂಗಡಿಗಳ ತಪಾಸಣೆ ನಡೆಸಲಾಗಿದೆ.
ಈ ವೇಳೆಯಲ್ಲಿ ಒಟ್ಟು 7 ವಿಶೇಷ ತಪಾಸಣೆ ಕೈಗೊಂಡು 3 ಬಾಲಕಾರ್ಮಿಕ ಮಕ್ಕಳು ಹಾಗೂ 18 ಕಿಶೋರ ಕಾರ್ಮಿಕ ಮಕ್ಕಳು ಪತ್ತೆಯಾಗಿದ್ದು, ಈ ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಇದಲ್ಲದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ 4 ಮಕ್ಕಳನ್ನು ನೇರವಾಗಿ ಮಕ್ಕಳು ಈ ಮೊದಲು ವಿದ್ಯಾಭ್ಯಾಸ ಮಾಡುತ್ತಿರುವ ಶಾಲೆಗಳಿಗೆ ದಾಖಲಿಸಲಾಗಿದೆ.
ತಪಾಸಣೆಗಳಲ್ಲಿ ಪತ್ತೆ ಹಚ್ಚಲಾದ ಬಾಲಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ನ್ಯಾಯಾಲಯದಲ್ಲಿಮೊಕದ್ದಮೆ/ ಚಾರ್ಜ್ ಶೀಟ್ ಹೂಡಲಾಗಿದೆ. ಈ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿಶೇಷ ತಪಾಸಣೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ, ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ತಾಲೂಕು ಮಟ್ಟದಲ್ಲಿ ಕಾರ್ಮಿಕ ನಿರೀಕ್ಷಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರು ಹಾಗೂ ಸಿಬ್ಬಂದಿಗಳು, ಪೋಲಿಸ್ ಇಲಾಖೆ, ಮಕ್ಕಳ ಸಹಾಯವಾಣಿ-1098 ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಸಮಯದಲ್ಲಿ ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಿ ಬಿತ್ತಿ ಪತ್ರಗಳನ್ನು ಅಂಟಿಸಿ ಜಾಗೃತಿ ಮೂಡಿಸಲಾಯಿತು. 18 ವರ್ಷದ ಒಳಗಿನ ಯಾವುದೇ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಮೂಡಿಸಲಾಯಿತು.

Get real time updates directly on you device, subscribe now.

Comments are closed.

error: Content is protected !!