ಸಂವಿಧಾನ ದಿನ: ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಪೀಠಿಕೆ ವಾಚನ
: ಸಂವಿಧಾನ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರದAದು ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು.
*ಭಾರತದ ಸಂವಿಧಾನ ಪ್ರಸ್ತಾವನೆ:-* ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ : ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ; ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟçದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ; ನಮ್ಮ ಸಂವಿಧಾನದ ಸಭೆಯಲ್ಲಿ 1949ನೇಯ ಇಸವಿ ನವೆಂಬರ್ ತಿಂಗಳ 26ನೇ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ ನಾಲವಾರ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ ಹೊಸಮನಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು, ಸಂವಿಧಾನದ ಪೀಠಿಕೆ ಓದಿದರು.
Comments are closed.