ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ ಮತ್ತು ಛಲವಾದಿ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘದ ಆಶ್ರಯದಲ್ಲಿ ಸಂವಿಧಾನ ಸಮರ್ಪಣಾ ದಿನ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ
ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುತ್ತಿರುವುದು ಸಂತಸ : ಸಂಗಣ್ಣ ಕರಡಿ
ಕೊಪ್ಪಳ : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಚಲವಾದಿ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುತ್ತಿರುವುದು ಸಂತಸ ತಂದಿದೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ನಗರದ ಹೊಸಪೇಟೆ ರಸ್ತೆ ಮೇಘರಾಜ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ ಮತ್ತು ಛಲವಾದಿ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘದ ಆಶ್ರಯದಲ್ಲಿ ಸಂವಿಧಾನ ಸಮರ್ಪಣಾ ದಿನದ ನಿಮಿತ್ತ ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.೬೦ಕ್ಕಿಂತ ಹೆಚ್ಚು ಅಂಕ ಪಡೆದ ಛಲವಾದಿ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ
ಇಡೀ ವಿಶ್ವದಲ್ಲಿ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ, ಪ್ರತಿಯೊಬ್ಬರು ಶಿಕ್ಷಣವಂತರಾದಾಗ ಮಾತ್ರ ಸಮಾಜದ ಅಭಿವೃದ್ಧಿಯಾಗುತ್ತದೆ,ಇಂದು ಚಲವಾದಿ ಸಮಾಜ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದೆ,ಇಂಥ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜದವರು ಒಂದೆಡೆ ಸೇರಲು ಸಾಧ್ಯವಾಗುತ್ತದೆ ಎಂದರು.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಮಾತನಾಡಿ ಸಮಾಜ ಶಿಕ್ಷಣವಂತರಾದಾಗ ಮಾತ್ರ ಅಭಿವೃದ್ಧಿ ಸಾಧ್ಯ,ಸರ್ವರಿಗೂ ಸಮ ಬಾಳು ಸಮಪಾಲು ಎನ್ನುವಂತೆ ಶಿಕ್ಷಣವನ್ನು ಯಾರು ಕಸಿದುಕೊಳ್ಳಲು ಸಾಧ್ಯವಿಲ್ಲ ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅವಶ್ಯ ಎಂದರು.
ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಎಂಎಲ್‌ಸಿ ಹೇಮಲತಾ ನಾಯಕ್ ,ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್,ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತ ಮಾತನಾಡಿದರು
ಜಿಲ್ಲಾ ಛಲವಾದಿ ಜಾಗೃತಿ ವೇದಿಕೆದ ಸಂಚಾಲಕ ಕೃಷ್ಣ ಇಟ್ಟಂಗಿ ಮತ್ತು ಛಲವಾದಿ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘದ ಜಿಲ್ಲಾಧ್ಯಕ್ಷ ಜಿ.ಎಂ.ಬೆಲ್ಲದ್ ಜಂಟಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ನಗರಸಭೆ ಸದಸ್ಯರಾದ ಮುತ್ತುರಾಜ ಕುಷ್ಟಗಿ, ಸಿದ್ದು ಮ್ಯಾಗೇರಿ, ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜಶೇಖರ ಆಡೂರು, ಸಣ್ಣ ಕನಕಪ್ಪ ಕನಕಗಿರಿ,ಡಾ. ಅನಿಲ್ ಕುಮಾರ್ ಬೇಗರ, ಭಾಗ್ಯನಗರ ಪ.ಪಂ.ಸದಸ್ಯೆ ಸರಸ್ವತಿ ಇಟ್ಟಂಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಶಪ್ಪ ಚಲವಾದಿ ಸ್ವಾಗತಿಸಿದರು.
Comments are closed.